Wednesday, June 29, 2022

Latest Posts

ಕರ್ನಾಟಕದಲ್ಲಿ ಮಳೆರಾಯನ ಆರ್ಭಟ: 6 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಯಡಿಯೂರಪ್ಪ ಸಭೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………….

ಹೊಸ ದಿಗಂತ ಆನ್ ಲೈನ್ ಡೆಸ್ಕ್

ಅತಿವೃಷ್ಟಿಯಾಗುತ್ತಿರುವ ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರು ಹಾಗೂ ಧಾರವಾಡ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಸಂಜೆ ವಿಡಿಯೋ ಸಂವಾದ ನಡೆಸಿದ್ದು, ಹೆಚ್ಚಿನ ಮಳೆಯಿಂದ ತಲೆದೋರಿರುವ ಪ್ರವಾಹ ಪರಿಸ್ಥಿತಿ ಹಾಗೂ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಪ್ರವಾಹ ಪೀಡಿತ ಗ್ರಾಮಗಳ ಗ್ರಾಮಸ್ಥರನ್ನು ಶೀಘ್ರ ತೆರುವುಗೊಳಿಸಿ ಸುರಕ್ಷಿತ ಸ್ಥಳಗಳಿಗೆ ಕಳುಹಿಸಲು ಹಾಗೂ ಪ್ರವಾಹ ಉಂಟಾಗುವ ಸಾದ್ಯತೆ ಇರುವ ಗ್ರಾಮಗಳನ್ನು ಸಹ ಮುಂಜಾಗ್ರತಾ ಕ್ರಮವಾಗಿ ಸ್ಥಳಾಂತರಿಸಲು ಎನ್ ಡಿಅರ್ ಎಫ್ ಮತ್ತು ಎಸ್ ಡಿ ಆರ್ ಎಫ್ ತಂಡಗಳ ಅಗತ್ಯ ಇರುವ ಜಿಲ್ಲೆಗಳಿಗೆ ತುರ್ತು ಕಳುಹಿಸಲು ಸಭೆಯಲ್ಲಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದರು.
ಕಾಳಜಿ ಕೇಂದ್ರಗಳ ಆದಷ್ಟು ಹೆಚ್ಚು ತೆರೆದು ಸರ್ವ ಸನ್ನದ್ಧವಾಗಿಟ್ಟುಕೊಳ್ಳಬೇಕು, ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ರಜೆ ಹಾಕದೆ ಕೆಲಸ ಮಾಡಬೇಕು. ಹಣಕಾಸಿನ ನೆರವು ಅಗತ್ಯವಿದ್ದಲ್ಲಿ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತಿತರ ಹಿರಿಯ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss