ಕಾಸರಗೋಡು ಜಿಲ್ಲೆಯಲ್ಲಿ ಮಳೆ ಅಧ್ವಾನ: ನೆರೆ ಭೀತಿ, ಅಪಾಯದಲ್ಲಿ ಮನೆಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಮಳೆಯ ಅಬ್ಬರಕ್ಕೆ ಕಾಸರಗೋಡು ಜಿಲ್ಲೆ ಅಕ್ಷರಶಃ ನಲುಗಿ ಹೋಗಿದೆ.
ಉಪ್ಪಳದಲ್ಲಿ ಮಂಗಳವಾರ ಬೆಳಿಗ್ಗೆ ಮನೆಯೊಂದಕ್ಕೆ ನೀರು ನುಗ್ಗಿ ಸಂಕಷ್ಟದ ಸ್ಥಿತಿ ನಿರ್ಮಾಣವಾಯಿತು.
ಉಪ್ಪಳದಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ತುರ್ತು ಕಾರ್ಯಾಚರಣೆ ನಡೆಸಿ ಅಪಾಯದಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ್ದಾರೆ. ಜಿಲ್ಲೆಯ ಹೊಸದುರ್ಗ ತಾಲೂಕಿನಲ್ಲಿ ಕೂಡಾ ಗಾಳಿಯ ಹೊಡೆತಕ್ಕೆ ನಾಲ್ಕು ಮನೆಗಳಿಗೆ ಹಾನಿಯಾಗಿದೆ.
ಕರಂದಕ್ಕಾಡ್, ಮೊಗ್ರಾಲ್, ಹೊ ಸಂಗಡಿ ಮೊದಲಾದ ಕಡೆಗಳಲ್ಲಿ ರಸ್ತೆಯಲ್ಲಿಯೇ ನೀರು ತುಂಬಿಕೊಂಡಿದ್ದು‌ಸಂಚಾರಕ್ಕೆ ಅಡಚಣೆಯಾಗಿದೆ.
ಈ ನಡುವೆ ಕಾಮಗಾರಿ ನಡೆಯುತ್ತಿರುವ ತಲಪಾಡಿ ಕಾಸರಗೋಡು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿಯೂ ಮಳೆ ಅವ್ಯವಸ್ತೆಗೆ ಕಾರಣವಾಗಿದೆ. ನೀರು ಹರಿಯಲು ವ್ಯವಸ್ಥೆ ಇಲ್ಲದೆ ರಸ್ತೆ ಯಲ್ಲೇ ನೀರು ತುಂಬಿ ಕೊಂಡು ಕೃತಕ ಕರೆ ನಿರ್ಮಾಣವಾಗಿದೆ.
ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೂ ನೀರು ನುಗ್ಗುತ್ತಿದ್ದು ನೂರಾರು ಮನೆಗಳು ಅಪಾಯದಲ್ಲಿವೆ. ಅಪಾಯಕ್ಕೆ ಸಿಲುಕಿದವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!