Tuesday, July 5, 2022

Latest Posts

ರಾಷ್ಟ್ರ ರಾಜಧಾನಿಯಲ್ಲಿ ಮಳೆಯಬ್ಬರ : ವಿಮಾನ ಕಾರ್ಯಾಚರಣೆ ಸ್ಥಗಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ಬಲವಾದ ಗಾಳಿ ಮತ್ತು ತೀವ್ರ ಮಳೆಯಿಂದಾಗಿ ದೆಹಲಿಯ ಕೆಲವು ಭಾಗಗಳಲ್ಲಿ ಮರಗಳು ಧರೆಗುರುಳಿದ್ದು ಇದರ ಪರಿಣಾಮವಾಗಿ ರಸ್ತೆಗಳನ್ನು ನಿರ್ಬಂಧಿಸಲಾಗಿದೆ.

ಮಳೆಯಿಂದಾಗಿ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ (IGI) ವಿಮಾನ ನಿಲ್ದಾಣದ ಕಾರ್ಯಾಚರಣೆಯ ಮೇಲೆ ಮಳೆಯು ಪ್ರತಿಕೂಲ ಪರಿಣಾಮ ಬೀರಿದ್ದು ಹಲವು ವಿಮಾನಗಳ ಹಾರಾಟವನ್ನು ಸ್ಥಗಿತ ಗೊಳಿಸಲಾಗಿದೆ. ನವೀಕರಿಸಿದ ವಿಮಾನ ಮಾಹಿತಿಗಾಗಿ ಸಂಬಂಧಿಸಿದ ವಿಮಾನಯಾನ ಸಂಸ್ಥೆಯನ್ನು ಸಂಪರ್ಕಿಸಲು ವಿಮಾನ ನಿಲ್ದಾಣದ ಅಧಿಕಾರಿಗಳು ಪ್ರಯಾಣಿಕರನ್ನು ಕೋರಿದ್ದಾರೆ.

ಈ ನಡುವೆ ಭಾರತೀಯ ಹವಾಮಾನ ಇಲಾಖೆ (IMD) ಮಧ್ಯಮ ತೀವ್ರತೆಯ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಿದೆ. ಗಂಟೆಗೆ 60-9ಕಿ.ಮಿ. ವೇಗದಲ್ಲಿ ಬಿರುಗಾಳಿಯು ಮುಂದುವರಿಯಲಿದೆ ಎಂದು ತಿಳಿಸಿದೆ. ಹಾಗೂ ಜನಸಾಮಾನ್ಯರು ಮನೆಯಿಂದ ಹೊರಬೀಳದೇ ಸುರಕ್ಷಿತವಾಗಿರುವಂತೆ ಸೂಚಿಸಲಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss