ಈ ರಾಜ್ಯಗಳಲ್ಲಿ ಇಂದೂ ಮಳೆರಾಯನ ರುದ್ರತಾಂಡವ: ಐಎಂಡಿ ಎಚ್ಚರಿಕೆ 

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಇಂದೂ ಕೂಡ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸೋಮವಾರ ಬಿಡುಗಡೆಯಾದ ಹವಾಮಾನ ಬುಲೆಟಿನ್‌ನಲ್ಲಿ..ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಆಲಿಕಲ್ಲು ಮಳೆಯಾಗಲಿದೆ.

ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಐಎಂಡಿ ಟ್ವೀಟ್‌ ಮಾಡಿದೆ.

ಉಪಗ್ರಹ ಚಿತ್ರಗಳ ಪ್ರಕಾರ ಗುಜರಾತ್ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರದ ಹಲವೆಡೆ ಆಲಿಕಲ್ಲು ಸಹಿತ ಮಳೆಯಾಗಲಿದೆ ಎಂದು ಮುಂಬೈ ಹವಾಮಾನ ಕೇಂದ್ರ ತಿಳಿಸಿದೆ. ಮುಂಬೈ, ಪಾಲ್ಘರ್, ಧುಲೆ, ನಂದೂರ್ ಬಾರ್, ರಾಯಗಡ, ಥಾಣೆ, ರತ್ನಗಿರಿ, ಸಿಂಧುದುರ್ಗ, ನಾಸಿಕ್, ಅಹ್ಮದ್‌ನಗರ ಮತ್ತು ಪುಣೆ ಜಿಲ್ಲೆಗಳಲ್ಲಿ ಮಳೆರಾಯನ ಅಬ್ಬರ ಹೆಚ್ಚಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!