ಮೈಸೂರು, ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಕರಾವಳಿ, ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಎರಡು ದಿನ ಭಾರಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರ್ಗಿ ಜಿಲ್ಲೆಯಲ್ಲಿಯೂ ಮಳೆಯಾಗುವ ಸಂಭವ ಇದೆ. ತಗ್ಗು ಪ್ರದೇಶದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!