Monday, November 3, 2025

WEATHER |ರಾಜ್ಯದಲ್ಲಿ ಹೆಚ್ಚಾಯ್ತು ಮಳೆಯಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟದಲ್ಲಿ ವರುಣಾರ್ಭಟ ಹೆಚ್ಚಿರಲಿದ್ದು, ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಿದೆ. ಉಳಿದೆಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಿರಲಿದೆ. ಬೆಂಗಳೂರಿನಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,ಉತ್ತರ ಕನ್ನಡ, ಉಡುಪಿಯಲ್ಲಿ 30-40 ಕೀಮೀ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದ್ದು, ಈ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಿರಲಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ , ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

error: Content is protected !!