October 18, 2026
Sunday, October 18, 2026
spot_img

ಅಂತೂ ಇಂತು ರಾಜ್ಯದಲ್ಲಿ ಮಳೆ ಬೀಳುವ ಸೂಚನೆ, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಿಸಿಲ ಬೇಗೆಯಿಂದ ಬಳಲುತ್ತಿರುವ ರಾಜ್ಯಕ್ಕೆ ಮಳೆಯ ದರುಶನವಾಗುವ ಸಾಧ್ಯತೆ ಇದೆ. ಇಂದಿನಿಂದ 3 ದಿನ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.

ಮಳೆಗಾಲದಲ್ಲಿ ಬಿಸಿಲು ಹೆಚ್ಚಾಗುತ್ತಿದ್ದು, ಬೇಸಿಗೆಯ ಅನುಭವವಾಗುತ್ತಿದೆ. ಇದರ ನಡುವೆ ಜುಲೈ 17,18,19ರಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನೀಡಿದೆ.ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ.

Must Read