ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮೇ 7ರ ಬಳಿಕ ರಾಜ್ಯಾದ್ಯಂತ ಮಳೆ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೇ 7 ಮತ್ತು ಮೇ 8ರಂದು ಗುಡುಗು-ಸಿಡಿಲಿನಿಂದ ಕೂಡಿದ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಹಾಗೂ ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.