ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಲೆನಾಡಿನ ಭಾಗಗಳಾದ ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನ ಹಲವೆಡೆ ಗಾಳಿ ಸಹಿತ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಭಾಗಗಳಿಗೆ ಅರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಲವೆಡೆ ಹಗುರ ಮಳೆ ಬೀಳಲಿದೆ ಎಂದು ಇಲಾಖೆ ತಿಳಿಸಿದೆ.
Thank you for information