ರಾಜ್ಯದ ಹಲವು ಕಡೆ ಇಂದು ಮಳೆ ಸಾಧ್ಯತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯದ ಹಲವು ಕಡೆ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಆಲಿಕಲ್ಲು ಸಹಿತ ಮಳೆ ಆಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆ ಮಳೆಯಾಗಲಿದೆ. ಶನಿವಾರವು ಕೂಡ ಇಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಇಲಾಖೆ ಹೇಳಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯಾಗಬಹುದು. ಉಷ್ಣಾಂಶ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ರಾಜ್ಯದಲ್ಲಿ ಗುರುವಾರ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ (40.7 ಡಿಗ್ರಿ ಸೆಲ್ಸಿಯಸ್) ದಾಖಲಾಗಿದೆ. ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ ಎಂದು ಇಲಾಖೆಯು ಮಾಹಿತಿ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!