April 11, 2026
Saturday, April 11, 2026
spot_img

ಅ.18 ರಿಂದ ಮಳೆ ಕಡಿಮೆಯಾಗುತ್ತಂತೆ: ನಾವ್ ಹೇಳ್ತಿಲ್ಲ, ಹವಾಮಾನ ಇಲಾಖೆಯವ್ರು ಹೇಳ್ತಿದ್ದಾರೆ ನೋಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯು ಇನ್ನೂ ಮುಂದುವರಿಯಲಿದೆ. ರಾಜ್ಯದಾದ್ಯಂತ ಮುಂದಿನ 3 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ 18 ರಿಂದ ಮಳೆಯ ಪ್ರಮಾಣವು ಇಳಿಕೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದ್ದು, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ತೀವ್ರ ಮಳೆ ಹಾಗೂ ಗುಡುಗು ಸಹಿತ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು (ಗ್ರಾಮಾಂತರ ಹಾಗೂ ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದೆ.

ನಾಳೆಯ ಹವಾಮಾನ:
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆ ಆರ್ಭಟ ಗುರುವಾರವೂ ಮುಂದುವರಿಯಲಿದೆ. ಬಳ್ಳಾರಿ, ಬೆಂಗಳೂರು (ಗ್ರಾಮಾಂತರ ಮತ್ತು ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ರಾಜ್ಯದ ಉಳಿದ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಒಣ ಹವಾಮಾನ ಕಾಣಿಸಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !