October 17, 2026
Saturday, October 17, 2026
spot_img

ರಾಜ್ಯದಲ್ಲಿ ಮತ್ತೆ ಮಳೆರಾಯನ ಅಬ್ಬರ ಚುರುಕು: 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಮುಂದುವರಿದಿರುವ ಮಳೆಯು ಸೋಮವಾರವೂ ನಗರದ ಹಲವು ಭಾಗಗಳಲ್ಲಿ ಉತ್ತಮವಾಗಿ ಸುರಿಯಿತು. ಮಳೆಯ ಪರಿಣಾಮ ವಾಹನ ಸವಾರರು ಹಾಗೂ ಪಾದಚಾರಿಗಳು ಕೆಲಕಾಲ ತೊಂದರೆ ಅನುಭವಿಸಿದ್ದು, ಹಲವರು ಬಸ್ ನಿಲ್ದಾಣಗಳು ಮತ್ತು ಅಂಗಡಿಗಳ ಬಳಿ ಆಶ್ರಯ ಪಡೆದರು.

17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಹವಾಮಾನ ಇಲಾಖೆ ನಾಳೆ ರಾಜ್ಯದ 17 ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇರುವುದಾಗಿ ತಿಳಿಸಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಕರ್ನಾಟಕ, ಕರಾವಳಿ ಮತ್ತು ಮಲೆನಾಡಿನ ಹಲವು ಭಾಗಗಳಲ್ಲಿ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಇದನ್ನೂ ಓದಿ:

ಕೆರ್ಗಾಳುವಿನಲ್ಲಿ ರಾಜ್ಯದಲ್ಲೇ ಅಧಿಕ ಮಳೆ

ಉಡುಪಿ ಜಿಲ್ಲೆಯ ಬೈಂದೂರಿನ ಕೆರ್ಗಾಳು ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 160.5 ಮಿ.ಮೀ. ಮಳೆಯಾಗಿ ರಾಜ್ಯದಲ್ಲೇ ಅತಿ ಹೆಚ್ಚು ಮಳೆ ದಾಖಲಾಗಿದೆ. ಆಗುಂಬೆ ಸೇರಿದಂತೆ ಕರಾವಳಿ ಮತ್ತು ಮಲೆನಾಡಿನ ಹಲವು ಭಾಗಗಳಲ್ಲೂ ಉತ್ತಮ ಮಳೆಯಾಗಿದೆ.

Must Read