ರಾಜ್ಯದಲ್ಲಿ ಬಹುತೇಕ ಮಳೆ ಕಡಿಮೆಯಾಗಿದ್ದು, ಚಳಿಗಾಲ ಶುರುವಾಗಿದೆ. ಇಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಜಾನೆ ಹಾಗೂ ಸಂಜೆಯ ವೇಳೆಗೆ ಚಳಿ ಇರಲಿದೆ. ಮಧ್ಯಾಹ್ನದ ವೇಳೆಗೆ ಬಿಸಿಲಿನ ವಾತಾವರಣ ಇರಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
WEATHER | ರಾಜ್ಯದಲ್ಲಿ ಮಳೆ ಮುಗೀತು, ಇನ್ನು ಬಹುತೇಕ ಜಿಲ್ಲೆಗಳಲ್ಲಿ ಚಳಿ ಚಳಿ

