ದೆಹಲಿಗೆ ತಟ್ಟಿದ ಮಳೆ ಎಫೆಕ್ಟ್: 15 ವಿಮಾನಗಳ ಮಾರ್ಗ ಬದಲಾವಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಧಾನಿ ದೆಹಲಿಯಲ್ಲಿ ಭಾನುವಾರ ಸುರಿದ ಭಾರೀ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಪರಿಸ್ಥಿತಿಯ ಹಿನ್ನೆಲೆಯಲ್ಲಿ 15 ವಿಮಾನಗಳ ಮಾರ್ಗವನ್ನು ಬದಲಾಯಿಸಲಾಗಿದ್ದು, ಅವುಗಳನ್ನು ಜೈಪುರ ಮತ್ತು ಲಕ್ನೋ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಗಿದೆ. ದೆಹಲಿ ಏರ್‌ಪೋರ್ಟ್‌ನಲ್ಲಿ ಕಾರ್ಯಾಚರಣೆಗೆ ಅಡ್ಡಿ ಮಳೆಯಿಂದ ದೆಹಲಿ ವಿಮಾನ ನಿಲ್ದಾಣದ ಕಾರ್ಯಾಚರಣೆಯ ಮೇಲೂ ಕೆಲಕಾಲ ಪರಿಣಾಮ ಬೀರಿದ್ದು, ಪ್ರಯಾಣಿಕರು ವಿಳಂಬವನ್ನು ಎದುರಿಸಿದರು. ನಗರದಲ್ಲಿ ದಿನವಿಡೀ ಗುಡುಗು ಸಹಿತ ಮಳೆಯಾಗಿದ್ದು, ತಾಪಮಾನವೂ ಗಮನಾರ್ಹವಾಗಿ ಇಳಿಕೆಯಾಗಿದೆ. ಇದನ್ನೂ ಓದಿ: … Continue reading ದೆಹಲಿಗೆ ತಟ್ಟಿದ ಮಳೆ ಎಫೆಕ್ಟ್: 15 ವಿಮಾನಗಳ ಮಾರ್ಗ ಬದಲಾವಣೆ