ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನಲ್ಲಿ ಅತಿಯಾಗಿ ಮಳೆ ಸುರಿಯುತ್ತಿದ್ದು, ಮನೆಯ ಗೋಡೆ ಕುಸಿದು ಒಂಬತ್ತು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ.
ತಮಿಳುನಾಡಿನ ತಿರುವಾರೂರ್ನಲ್ಲಿ ಬಾಲಕಿ ಮೊನಿಷಾ ಮೇಲೆ ಮನೆಯ ಗೋಡೆ ಕುಸಿದು ಬಿದ್ದಿದೆ. ಮೊನಿಷಾ ಸಹೋದರ ಮೋಹನ್ದಾಸ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ತಮಿಳುನಾಡಿನ ಎಂಟು ಜಿಲ್ಲೆಗಳಲ್ಲಿ ಸೋಮವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.