ಉಡುಪಿಗೆ ಮಳೆ: ವಿವಿಧೆಡೆ ಶಿಕ್ಷಣ ಸಂಸ್ಥೆಗಳಿಗೆ ರಜೆ, ಕಡಲ ತೀರದಲ್ಲೂ ವ್ಯಾಪಕ ಕಟ್ಟೆಚ್ಚರ

ಹೊಸದಿಗಂತ, ಮಂಗಳೂರು:

ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ‌ ವ್ಯಾಪಕ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಈಗಾಗಲೇ ಉಡುಪಿ, ಕಾಪು, ಕಾರ್ಕಳ, ಹೆಬ್ರಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದ್ದು, ಸಂಭಾವ್ಯ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸರ್ವ ಸನ್ನದ್ಧವಾಗಿದೆ.

ಈ ನಡುವೆ ಮಳೆ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕಡಲು ಕೂಡಾ ಪ್ರಕ್ಷುಬ್ಧಗೊಳ್ಳುವ ಸಾಧ್ಯತೆ ಇರುವುದರಿಂದ‌ ಪ್ರವಾಸಿಗರು, ತೀರದ ನಿವಾಸಿಗಳು, ಮೀನುಗಾರರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!