Tuesday, September 9, 2025

WEATHER |ರಾಜ್ಯದ 13 ಜಿಲ್ಲೆಗಳಲ್ಲಿ 2 ದಿನಗಳ ಬಳಿಕ ಮತ್ತೆ ಮಳೆ ಶುರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಎರಡು ದಿನಗಳ ಬಳಿಕ ಕರ್ನಾಟಕದಾದ್ಯಂತ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ಶಿವಮೊಗ್ಗ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಮಾಣಿ, ಕೋಟಾ, ಕದ್ರಾ, ಬಂಟವಾಳ,ಬಂಡೀಪುರ, ಶಕ್ತಿನಗರ, ರಾಯಲ್ಪಾಡು, ಪುತ್ತೂರು, ಮಂಗಳೂರು, ಕೊಟ್ಟಿಗೆಹಾರ, ಕಾರವಾರ, ಗೋಕರ್ಣ, ಚಿಕ್ಕಬಳ್ಳಾಪುರ, ಅಂಕೋಲಾ, ಆಗುಂಬೆಯಲ್ಲಿ ಮಳೆಯಾಗಿದೆ.

ಇದನ್ನೂ ಓದಿ