ಸಂಜೆ ಆಗ್ತಿದ್ದಂಗೆ ಬೆಂಗಳೂರಿಗೆ ಮಳೆರಾಯ ಎಂಟ್ರಿ: ಇನ್ನೂ 3 ದಿನ ಭಾರೀ ಮಳೆ ಸಾಧ್ಯತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಂಜೆ ಆಗ್ತಿದ್ದಂಗೆ ಬೆಂಗಳೂರಿನಲ್ಲಿ ಜೋರು ಮಳೆ ಶುರುವಾಗ್ತಿದೆ, ಇನ್ನೂ ಮೂರು ದಿನಗಳವರೆಗೆ ಮಳೆ ಮುಂದುವರಿಯುವ ನಿರೀಕ್ಷೆಯಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಮುಂದಿನ ಐದು ದಿನಗಳ ಕಾಲ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ಇಂದು ಕೂಡ ಬೆಂಗಳೂರು ನಗರದ ಕೆ.ಆರ್​.ವೃತ್ತ, ಕಾರ್ಪೊರೇಷನ್, ವಿಧಾನಸೌಧ, ಮೆಜೆಸ್ಟಿಕ್, ಗಾಂಧಿನಗರ, ಓಕಳಿಪುರಂ, ರಾಜಾಜಿನಗರ, ಗಿರಿನಗರ, ಬಸವೇಶ್ವರ ನಗರ, ಮಲ್ಲೇಶ್ವರಂ, ಆರ್.ಆರ್.ನಗರ, ವಿಜಯನಗರ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!