ಕೇರಳದಲ್ಲಿ ಇನ್ನಷ್ಟು ಬಿರುಸಾಗಲಿದೆ ಮಳೆ: ಎಚ್ಚರಿಕೆ ನೀಡಿದೆ ಹವಾಮಾನ ಇಲಾಖೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದ ವಿವಿಧೆಡೆಗಳಲ್ಲಿ ಮುಂದಿನ ಐದು ದಿನಳ ಕಾಲ ಮಳೆ ಇನ್ನಷ್ಟು ಬಿರುಸು ಪಡೆಯಲಿದೆ ಎಂದು ಹಮಾವಾನ ಇಲಾಖೆ ಎಚ್ಚರಿಕೆ ನೀಡಿದೆ.

ಈ ಹಿನ್ನೆಲೆಯಲ್ಲಿ ಇಂದು ಪತ್ತನಂತಿಟ್ಟ, ಅಲಪ್ಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಳಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆ, ಗಾಳಿಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕಡಲಿನಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದ್ದು, ಮೀನುಗಾರರು, ಪ್ರವಾಸಿಗರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!