May 12, 2026
Tuesday, May 12, 2026
spot_img

WEATHER | ರಾಜ್ಯದಲ್ಲಿ ಇನ್ನೂ ಮುಂದುವರಿಯಲಿದೆ ಮಳೆ, ಹವಾಮಾನ ಇಲಾಖೆ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಇಂದು ಸಹ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಕೋಲಾರ, ಮೈಸೂರು, ರಾಮನಗರದ ಕೆಲವು ಭಾಗಗಳಲ್ಲಿ ಅಕ್ಟೋಬರ್ 15 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !