ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಮಳೆಗೆ ಜನ ಹೈರಾಣಾಗಿದ್ದರು. ಇದೀಗ ವರುಣ ಬೆಂಗಳೂರಿಗರ ಮೇಲೆ ಕರುಣೆ ತೋರಿದಂತೆ ಕಂಡಿದ್ದು, ಸದ್ಯಕ್ಕೆ ತಾತ್ಕಾಲಿಕ ಬ್ರೇಕ್ ತೆಗೆದುಕೊಳ್ಳುವ ಸಾಧ್ಯತೆ ಇದೆ. ಮತ್ತೆ ಜೂನ್ ಮೊದಲ ವಾರದ ಬಳಿಕ ಮುಂಗಾರು ಎಂಟ್ರಿಯಾಗಿ ಅಬ್ಬರಿಸುವ ಸಾಧ್ಯತೆ ಇದೆ.
ಸದ್ಯ ಇಂದಿನಿಂದ ಮೇ 30ರವರೆಗೆ ಬೆಂಗಳೂರು ಸೇರಿದಂತೆ ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಬ್ರೇಕ್ ನೀಡಲಿದೆ. ಅತ್ತ ಕರಾವಳಿ ಭಾಗಕ್ಕೆ ಮಾತ್ರ ಯಲ್ಲೋ ಅಲರ್ಟ್ ನೀಡಲಾಗಿದ್ದು, ಕರಾವಳಿ ಭಾಗದಲ್ಲಿ ಜೋರು ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಮುಂದಿನ ಮೂರು ದಿನ ಬೆಂಗಳೂರು ಸೇರಿದಂತೆ ರಾಜ್ಯದ್ಯಾಂತ ಮೋಡ ಕವಿದ ವಾತಾವರಣ ಮತ್ತು ಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.