ಹೊಸದಿಗಂತ ಡಿಜಿಟಲ್ ಡೆಸ್ಕ್:
ಬರದ ನಾಡು ಎಂದು ಖ್ಯಾತಿ ಪಡೆದಿದ್ದ ಚಿಕ್ಕಬಳ್ಳಾಪುರ ಜಿಲ್ಲೆ ಇದೀಗ ಮಲೆನಾಡಿನಂತಾಗಿದೆ. ಕಳೆದ ಮೂರು ತಿಂಗಳಿನಿಂದ ಸುರಿಯುತ್ತಿರುವ ಮಳೆಯಿಂದಾಗಿ ಬಾಗೇಪಲ್ಲಿ ತಾಲೂಕಿನ ಚಿತ್ರಾವತಿ ಜಲಾಶಯ ನೀರಿನಿಂದ ತುಂಬಿ ಹರಿಯುತ್ತಿರುವುದು ಜನರಲ್ಲಿ ಹರ್ಷ ಮೂಡಿಸಿದೆ.
ಮಂಚೇನಹಳ್ಳಿ ರಾಯನಕಲ್ಲು ಕೆರೆ ಹಾಗೂ ಗೌರಿಬಿದನೂರು ತಾಲೂಕಿನ ಉತ್ತರ ಪಿನಾಕಿನಿ ನದಿಗೂ ಜೀವಕಳೆ ತುಂಬಿದೆ. ಆದರೆ, ಭಾರೀ ಮಳೆಯಿಂದ ಚಿಕ್ಕಬಳ್ಳಾಪುರ ನಗರದಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಮಂಚನಬಲೆ ಅಂಡರ್ ಪಾಸ್ ನೀರಿನಿಂದ ಮುಳುಗಡೆಯಾಗಿ ವಾಹನ ಸವಾರರು ಪರದಾಡುವಂತಾಗಿದೆ.