August 30, 2026
Sunday, August 30, 2026
spot_img

ಮಳೆ ಆರ್ಭಟ: ಆಗಸ್ಟ್‌ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ರಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿಗಳು ಆಗಸ್ಟ್‌ 3 (ಸೋಮವಾರ) ರಂದು ವಿವಿಧ ತಾಲ್ಲೂಕುಗಳ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಮಂಗಳೂರು, ಉಳ್ಳಾಲ, ಮೂಡಬಿದ್ರೆ, ಬಂಟ್ವಾಳ ಹಾಗೂ ಮೂಲ್ಕಿ ತಾಲ್ಲೂಕುಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ.

ಪುತ್ತೂರು, ಬೆಳ್ತಂಗಡಿ, ಕಡಬ ಹಾಗೂ ಸುಳ್ಯ ತಾಲ್ಲೂಕುಗಳಲ್ಲಿ ಪಿಯುಸಿ (PUC) ವರೆಗೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

ಈಗಾಗಲೇ ನಿಗದಿಯಾಗಿರುವ ವಿಶ್ವವಿದ್ಯಾಲಯ ಹಾಗೂ ಇತರ ಸಾರ್ವಜನಿಕ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ. ಶಾಲೆ-ಕಾಲೇಜುಗಳ ಶಿಕ್ಷಕರು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ನದಿ, ಹೊಳೆ, ಕೆರೆ ಹಾಗೂ ಜಲಾಶಯಗಳ ಬಳಿ ಸಾರ್ವಜನಿಕರು ತೆರಳದಂತೆ ಜಿಲ್ಲಾಡಳಿತ ಮನವಿ ಮಾಡಿದೆ. ತಗ್ಗು ಪ್ರದೇಶದ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದ್ದು, ಮೀನುಗಾರರು ಹಾಗೂ ಸಾರ್ವಜನಿಕರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !