ರಾಜ್ಯದಲ್ಲಿ ಮಳೆರಾಯನ ಆರ್ಭಟ: ಎಲ್ಲೆಲ್ಲಿ ಏನೇನು ಪರಿಸ್ಥಿತಿ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಇಂದು ಮುಂದುವರಿದಿದ್ದು, ರಾಜ್ಯದ ಹಲವೆಡೆ ಹಾನಿಯಾಗಿದೆ. ಚಿಕ್ಕಬಳ್ಳಾಪುರದಲ್ಲಿ ಬಿರುಗಾಳಿ ಬೀಸಿದ ಭಾರಿ ಮಳೆಗೆ ಹಳೆಯ ಅರಳಿ ಮರಗಳು ಧರೆಗುರುಳಿದೆ. ಇದರಿಂದ ಮರದ ಕೆಳಗೆ ಇದ್ದ ಬೈಕ್ ನಜ್ಜುಗುಜ್ಜಾಗಿದೆ.

ಜೋರಾದ ಗಾಳಿ ಮಳೆಯಿಂದಾಗಿ ಈಶ ಸದ್ಗುರು ಸನ್ನಧಿಯ ಗೇಟ್ ಬಳಿಯ ಅಂಗಡಿಯೊಂದರ ಮೇಲೆ ದೊಡ್ಡ ಜಾಹೀರಾತು ಫಲಕ ಬಿದ್ದಿದೆ. ಇದರಿಂದ ಅಂಗಡಿಗಳಿಗೂ ಹಾನಿಯಾಗಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ.

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಗ್ಗನಹಳ್ಳ ಗ್ರಾಮದಲ್ಲಿ ಗಾಳಿ ಮಳೆಗೆ ಗಿರಿಜಾ ಮನೆ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಹಾನಿಯಾಗಿದೆ. ಅದೃಷ್ಟವಶಾತ್ ಮನೆಯ ನಿವಾಸಿಗಳಿಗೆ ಯಾವುದೇ ಹಾನಿಯಾಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!