ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಚಳಿಗಾಲದ ವಾತಾವರಣ ಆರಂಭಗೊಂಡಿರುವಾಗಲೇ ಹವಾಮಾನ ಇಲಾಖೆಯು ಅನಿರೀಕ್ಷಿತ ಸುದ್ದಿ ನೀಡಿದೆ. ನಾಳೆ (ನ 29) ಮತ್ತು ನಾಡಿದ್ದು (ನ 30) ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.
ಮುಖ್ಯವಾಗಿ ಮಧ್ಯ ಕರ್ನಾಟಕ, ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ಸುಮಾರು 10 ಜಿಲ್ಲೆಗಳಲ್ಲಿ ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಮಳೆ ನಿರೀಕ್ಷಿತ ಜಿಲ್ಲೆಗಳ ವಿವರ ಇಂತಿದೆ:
ಬಳ್ಳಾರಿ, ಚಿತ್ರದುರ್ಗ,ತುಮಕೂರು, ಚಿಕ್ಕಬಳ್ಳಾಪುರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ.
ಉಳಿದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಅಥವಾ ಭಾಗಶಃ ಮೋಡ ಕವಿದ ವಾತಾವರಣ ಮುಂದುವರಿಯಲಿದೆ.
ಒಣ ಹವೆ ಇರುವ ನಿರೀಕ್ಷಿತ ಜಿಲ್ಲೆಗಳು: ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ ಮತ್ತು ವಿಜಯಪುರ.
ಕರಾವಳಿಯಲ್ಲಿ ಚಳಿ: ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯ ಕೆಲವೆಡೆ ಚಳಿಯ ಅನುಭವ ತೀವ್ರವಾಗುವ ಸಾಧ್ಯತೆ ಇದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆ ಕಡಿಮೆ ಇದೆ.

