ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಗಾಂಧಿ ಕುಟುಂಬ ಆತ್ಯಾಪ್ತ. ಇಂದಿರಾ ಗಾಂಧಿ ಕಾಲದಿಂದಲೂ ರಾಜಕೀಯದಲ್ಲಿ ಸಕ್ರಿಯವಾಗಿದ್ದ ನಾಯಕ.
ಇದೀಗ ಕಾಂಗ್ರೆಸ್ ಪರಮೋಚ್ಚ ನಾಯಕರ ವಿರುದ್ಧವೇ ಮಣಿಶಂಕರ್ ಅಯ್ಯರ್ ಗುಡುಗಿದ್ದಾರೆ. ರಾಜಕೀಯದಲ್ಲಿ ನನ್ನನ್ನು ಬೆಳೆಸಿದ್ದು ಗಾಂಧಿ ಕುಟುಂಬ, ಆದರೆ ನನ್ನ ಕರಿಯರ್ ಮುಗಿಸಿದ್ದು ಕೂಡ ಗಾಂಧಿ ಕುಟುಂಬ ಎಂದು ಹೇಳಿದ್ದಾರೆ.
ಕಳೆದ 10 ವರ್ಷದಿಂದ ಸೋನಿಯಾ ಗಾಂಧಿ, ರಾಹುಲ್ ಗಾಂದಿ ಸೇರಿದಂತೆ ಪ್ರಮುಖ ನಾಯಕರ ಭೇಟಿಯಾಗಲು ನನಗೆ ಅವಕಾಶ ನೀಡಿಲ್ಲ. 2 ಬಾರಿ ಪ್ರಿಯಾಂಕಾ ಗಾಂಧಿ ಭೇಟಿಯಾಗಲು ಅವಕಾಶ ಸಿಕ್ಕಿತ್ತು. ಪಾರ್ಟಿ ನಾಯಕರೂ ದೂರವಾಗಿದ್ದಾರೆ ಎಂದು 82 ವರ್ಷದ ಮಣಿಶಂಕರ್ ಅಯ್ಯರ್ ಹೇಳಿದ್ದಾರೆ.
ಪ್ರಿಯಾಂಕಾ ಗಾಂಧಿ ಒಂದೆರೆಡು ಭಾರಿ ಫೋನ್ ಮಾಡಿದ್ದಾರೆ. ಇಷ್ಟೇ ಸಂಪರ್ಕ ಎಂದು ಮಣಿಶಂಕರ್ ಅಯ್ಯರ್ ಹೇಳಿದ್ದಾರೆ.
ಪಕ್ಷ ನನ್ನನ್ನು ಉಚ್ಚಾಟನೆ ಮಾಡಿದಾಗ ಕಾರಣ ಕೇಳಿದ್ದೆ. ಇದೀಗ 10 ವರ್ಷಗಳೇ ಉರುಳಿದೆ. ಆದರೆ ಕಾರಣ ಸ್ಪಷ್ಟವಾಗಿಲ್ಲ ಎಂದು ಮಣಿಶಂಕರ್ ಅಯ್ಯರ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷವನ್ನೇ ಉಸಿರಾಗಿಸಿದ್ದ ಮಣಿಶಂಕರ್ ಅಯ್ಯರ್ ಇದೀಗ ಗಾಂಧಿ ಕುಟುಂಬದಿಂದ ದೂರವಾಗಿದ್ದಾರೆ. ಇದೇ ಗಾಂಧಿ ಕುಟುಂಬ ಮಣಿಶಂಕರ್ ಅಯ್ಯರ್ ರಾಜಕೀಯದ ಆರಂಭದ ದಿನಗಳಲ್ಲಿ ನೆರವಿಗೆ ನಿಂತಿತ್ತು.
ಮಣಿಶಂಕರ್ ಅಯ್ಯರ್ ಇದೇ ವೇಳೆ ಗಾಂಧಿ ಕುಟುಂಬದ ಹೊರತಾಗಿ ಯಾರಿಗೂ ಅವಕಾಶ ನೀಡಲಿಲ್ಲ. ಸಮರ್ಥವಾಗಿ ಸರ್ಕಾರ, ಪಕ್ಷ ಮುನ್ನಡೆಸುವ ಜವಾಬ್ದಾರಿಯನ್ನು ಗಾಂಧಿ ಕುಟುಂಬ ಬಿಟ್ಟುಕೊಡಲಿಲ್ಲ ಅನ್ನೋದನ್ನು ಪರೋಕ್ಷವಾಗಿ 2012ರ ಘಟನೆ ಹೇಳುವ ಮೂಲಕ ವಿವರಿಸಿದ್ದಾರೆ.