ಹೊಸದಿಗಂತ ಬೆಂಗಳೂರು:
ಪಾಕಿಸ್ತಾನದ ಪರವಾಗಿ ಯಾರೇ ಮಾತನಾಡಿದರೂ ಅದು ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ಪ್ರಕರಣದಲ್ಲಿ ಹದಿನೈದು ಜನರ ಮೇಲೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು. ಯಾರೇ ಪಾಕಿಸ್ತಾನದ ಪರವಾಗಿ ಮಾತನಾಡಿದರೂ ಅದು ತಪ್ಪು ಎಂದು ಹೇಳಿದ್ದಾರೆ.