ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲಯಾಳಂ (Malayalam) ಸಿನಿಮಾ ರಂಗದಲ್ಲಿ ಛಾಪು ಮಾಡಿಸುತ್ತಿರುವ ಕನ್ನಡದ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ (Raj B Shetty) ಇದೀಗ ಮತ್ತೊಂದು ಮಲಯಾಳಂ ಚಿತ್ರವನ್ನು ಒಪ್ಪಿಕೊಂಡಿದ್ದಾರೆ.
ಸ್ಟಾರ್ ನಟ ಮಮ್ಮಟ್ಟಿ (Mammootty) ನಾಯಕನಾಗಿ ನಟಿಸುತ್ತಿರುವ ಟರ್ಬೋ (Turbo) ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ವಿಶೇಷ ಪಾತ್ರವನ್ನು ಮಾಡಲಿದ್ದಾರೆ. ಸ್ವತಃ ಚಿತ್ರತಂಡವೇ ಈ ಮಾಹಿತಿಯನ್ನು ಹೊರ ಹಾಕಿದೆ.
ಒಂದು ಕಡೆ ಎರಡೆರಡು ಮಲೆಯಾಳಂ ಸಿನಿಮಾದಲ್ಲಿ ರಾಜ್ ನಟಿಸುತ್ತಿದ್ದರೆ, ಮತ್ತೊಂದು ಕಡೆ ಮಲಯಾಳಂ ಸಿನಿಮಾವೊಂದನ್ನು ಅವರು ನಿರ್ದೇಶನ ಮಾಡಲಿದ್ದಾರೆ ಎನ್ನುವ ಮಾಹಿತಿಯೂ ಸಿಕ್ಕಿದೆ. ದುಲ್ಕರ್ ಸಲ್ಮಾನ್ ಗಾಗಿ ರಾಜ್ ಶೆಟ್ಟಿ ಚಿತ್ರವೊಂದನ್ನು ನಿರ್ದೇಶನ (Direction) ಮಾಡಲಿದ್ದಾರೆ.
ರಾಜ್ ಬಿ ಶೆಟ್ಟಿ (Raj B Shetty)ಅವರ ನಿರ್ದೇಶನದಲ್ಲಿ ಕೆಲಸ ಮಾಡುವುದಕ್ಕಾಗಿ ನಾನು ಕಾಯುತ್ತಿದ್ದೇನೆ ಎಂದು ದುಲ್ಕರ್ ಮಾತನಾಡಿದ್ದು, ಉಳಿದಂತೆ ಯಾವ ವಿಚಾರವನ್ನೂ ಅವರು ಹಂಚಿಕೊಂಡಿಲ್ಲ. ಈ ಮೂಲಕ ರಾಜ್ ಬಿ ಶೆಟ್ಟಿ ಮಲಯಾಳಂ ಚಿತ್ರೋದ್ಯಮಕ್ಕೆ ನಿರ್ದೇಶಕರಾಗಿ ಬರುವುದು ಪಕ್ಕಾ ಎನ್ನುವುದನ್ನು ಖಚಿತ ಪಡಿಸಿದ್ದಾರೆ.