ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ ಅವರ ಲೈಟರ್ ಬುದ್ಧ ಫಿಲಂಸ್ ನಿರ್ಮಾಣ ಸಂಸ್ಥೆಯಲ್ಲಿ ನಿರ್ಮಾಣಗೊಂಡ ʼಸು ಫ್ರಮ್ ಸೋʼ ಕನ್ನಡ ಸಿನಿಮಾದ (Su From So Movie) ದ ʼಡ್ಯಾಂಕ್ಸ್ ಅಂಥಮ್ʼ ವಿಡಿಯೋ ಸಾಂಗ್ ಬಿಡುಗಡೆಯಾಗಿದ್ದು, ಸಕತ್ ಟ್ರೆಂಡ್ ಮಾಡುತ್ತಿದೆ.
ಈ ಹಾಡಿಗೆ ಸಾಹಿತ್ಯ ರಾಜ್ ಬಿ ಶೆಟ್ಟಿ ಅವರದ್ದು. ಅನುರಾಗ್ ಕುಲಕರ್ಣಿ ಅವರು ಸೊಗಸಾಗಿ ಹಾಡಿದ್ದಾರೆ ಹಾಗು ಸುಮೇಧ್ ಕೆ ಅವರು ಉತ್ತಮ ಸಂಗೀತ ನೀಡಿದ್ದಾರೆ. ಇದರ ನೃತ್ಯ ಸಂಯೋಜನೆಯನ್ನು ವಿನಾಯಕ ಆಚಾರ್ಯ ಮಾಡಿದ್ದಾರೆ.
ಈ ಹಾಡಿನಲ್ಲಿ ಜೆಪಿ ತುಮಿನಾಡು, ಶನೀಲ್ ಗೌತಮ್, ಪ್ರಕಾಶ್ ಕೆ. ತುಮಿನಾಡು, ದೀಪಕ್ ರೈ ಪಣಜೆ, ಮೈಮ್ ರಾಮದಾಸ್, ಅರ್ಜುನ್ ಕಜೆ ಹಾಗೂ ಇತರರು ಹೆಜ್ಜೆ ಹಾಕಿದ್ದಾರೆ.ಸಕತ್ ಆಗಿ ಮೂಡಿಬಂದಿದೆ. ಮುಂದೆ ಎಲ್ಲಾ ಪಾರ್ಟಿ ಹಾಗೂ ಇತರೆ ಕಾರ್ಯಕ್ರಮದಲ್ಲಿ ಈ ಹಾಡು ಕೇಳಿಸೋದು ಕನ್ಫರ್ಮ್ ಅನ್ನಿಸುತ್ತಿದೆ.
ʼಸು ಫ್ರಮ್ ಸೋʼ ಸಿನಿಮಾವನ್ನು ಜೆಪಿ ತುಮಿನಾಡು ನಟಿಸಿ ಮೊಟ್ಟ ಮೊದಲ ಬಾರಿಗೆ ನಿರ್ದೇಶನ ಮಾಡಿದ್ದಾರೆ. ಛಾಯಾಗ್ರಾಹಕರಾಗಿ ಎಸ್. ಚಂದ್ರಸೆಕರನ್ ಕಾರ್ಯ ನಿರ್ವಹಿಸಿದ್ದಾರೆ. ಈ ಸಿನಿಮಾವನ್ನು ಶಶಿಧರ್ ಶೆಟ್ಟಿ ಬರೋಡಾ, ರವಿ ರೈ ಕಳಸ, ರಾಜ್ ಬಿ ಶೆಟ್ಟಿ ಮೂವರು ಸೇರಿ ಅದ್ದೂರಿಯಾಗಿ ನಿರ್ಮಿಸಿದ್ದಾರೆ. ಸಂದೀಪ್ ತುಳಸಿದಾಸ್ ಅವರ ಹಿನ್ನೆಲೆ ಸಂಗೀತ ಇರುವ ಈ ಚಿತ್ರಕ್ಕಿದೆ ಅರ್ಜುನ್ ರಾಜ್ ಸಾಹಸ ಸಂಯೋಜನೆ ಮಾಡಿದ್ದಾರೆ. ಮುಂದಿನ ತಿಂಗಳು ಜುಲೈ 25ಕ್ಕೆ ಬಿಡುಗಡೆಯಾಗುತ್ತಿದೆ.