ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಲ್ಮೀಕಿ ನಿಗಮದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಚಿವ ಸ್ಥಾನದಿಂದ ನಾಗೇಂದ್ರ ವಜಾಗೊಳಿಸುವಂತೆ ಒತ್ತಾಯಿಸಿ ಇಂದು ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು ಸಲ್ಲಿಕೆ ಮಾಡಲಿದೆ.
ವಿಧಾನಸೌಧದಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರ ನೇತೃತ್ವದಲ್ಲಿ ಎಲ್ಲ ಶಾಸಕರು ಒಟ್ಟುಗೂಡಿ ಚರ್ಚೆ ಮಾಡಲಿದ್ದಾರೆ. ಇದೇ ವೇಳೆ, ಮುಂದಿನ ಹೋರಾಟದ ಕುರಿತು ರೂಪುರೇಷೆಯ ನಿರ್ಧಾರ ಮಾಡಲಿದ್ದಾರೆ. ಬಳಿಕ ರಾಜಭವನಕ್ಕೆ ತೆರಳಿ ಸಚಿವ ನಾಗೇಂದ್ರ ಅವರನ್ನು ವಜಾ ಮಾಡಲು ರಾಜ್ಯಪಾಲರಿಗೆ ಒತ್ತಾಯ ಮಾಡಲಿದ್ದೇವೆ. ಇದೊಂದು ಕಿವುಡು ಸರ್ಕಾರ ಎಂದು ರಾಜ್ಯಪಾರಿಗೆ ತಿಳಿಸಲಿದ್ದೇವೆ. ರಾಜ್ಯಪಾಲರು, ಸಂವಿಧಾನಾತ್ಮಕ ಅಧಿಕಾರ ಬಳಸಿ ಈ ಸಚಿವರನ್ನು ವಜಾ ಮಾಡಲು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸುತ್ತೇವೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್ ತಿಳಿಸಿದ್ದಾರೆ.