ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಕಾವೇರಿ ಕಿಚ್ಚು ಹೆಚ್ಚಾಗಿದ್ದು, ನಗರದಾದ್ಯಂತ ಇಂದು ಪ್ರತಿಭಟನೆಗಳು ನಡೆಯುತ್ತಿವೆ. ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ರಾಜಭವನದ ಎದುರು ಪ್ರತಿಭಟನೆ ನಡೆಯುತ್ತಿತ್ತು. ಪ್ರತಿಭಟನಾಕಾರರು ರಾಜಭವನ ಮುತ್ತಿಗೆ ಯತ್ನಿಸಿದ್ದರಿಂದ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಸೇರಿದಂತೆ 20ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ವಾಟಾಳ್ ನಾಗರಾಜ್ ರಾಜ್ಯ ಸರಕಾರ ಪೊಲೀಸರು ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಜನರ ಒಳಿತಿಗಾಗಿ ಮಾಡುತ್ತಿರುವ ಹೋರಾಟಕ್ಕೆ ಸರಕಾರದ ಬೆಂಬಲ ಬೇಕೇ..ಬೇಕು. ಹಾಗಾಗದೆ ಹೋರಾಟಗಾರರನ್ನು ಬಂಧಿಸುವ ಕೆಲಸ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಕೂಡಲೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು, ಇಲ್ಲವಾದರೆ ಇಂದು ಬೆಂಗಳೂರು ಸಪ್ಟೆಂಬರ್ 29ರಂದು ರಾಜ್ಯಾದ್ಯಂತ ಹೋರಾಟಕ್ಕೆ ಸಿದ್ದರಾಗಿ ಎಂದು ಎಚ್ಚರಿಕೆ ನೀಡಿದರು.