ಶೀಘ್ರವೇ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿ: ಪ್ರಧಾನಿ ಮೋದಿಗೆ ರಾಜ್​ ಠಾಕ್ರೆ ಮನವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ದೇಶದಲ್ಲಿ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಯಾಗಬೇಕು ಮತ್ತು ಏಕರೂಪ ನಾಗರಿಕ ಸಂಹಿತೆಯನ್ನುಶೀಘ್ರವೇ ಜಾರಿಗೊಳಸಬೇಕೆಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್​ಎಸ್​)ಯ ಅಧ್ಯಕ್ಷ ರಾಜ್​ ಠಾಕ್ರೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದಾರೆ.
ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಔರಂಗಾಬಾದ್ ನಗರದ ಹೆಸರನ್ನು ಸಂಭಾಜಿನಗರ ಎಂದು ಬದಲಾಯಿಸಬೇಕು ಎಂದು ಆಗ್ರಹಿಸಿದರು.
ಮಸೀದಿಗಳ ಧ್ವನಿವರ್ಧಕಗಳಿಗೆ ಪ್ರತಿಯಾಗಿ ಧ್ವನಿವರ್ಧಕದಲ್ಲಿ ಹನುಮಾನ್ ಚಾಲೀಸಾ ನುಡಿಸಲು ನಾನು ನಮ್ಮ ಕಾರ್ಯಕರ್ತರಲ್ಲಿ ಕೇಳಿಕೊಂಡಿದ್ದೆ. ನಂತರ ಸಂಸದೆ ನವನೀತ್ ರಾಣಾ ಮತ್ತು ಶಾಸಕ ರವಿ ರಾಣಾ ದಂಪತಿ ‘ಮಾತೋಶ್ರೀ’ (ಸಿಎಂ ಉದ್ಧವ್​ ಠಾಕ್ರೆ ನಿವಾಸ)ದ ಮುಂದೆ ಹನುಮಾನ್ ಚಾಲೀಸಾವನ್ನು ಪಠಿಸುವುದಾಗಿ ಹೇಳಿದ್ದರು.ಆದರೆ, ಅವರನ್ನು ಬಂಧಿಸಿದ್ದರು. ಅಲ್ಲದೇ, ಶಿವಸೇನೆ ಕಾರ್ಯುಕರ್ತರು ಮತ್ತು ರಾಣಾ ದಂಪತಿ ನಡುವೆ ಏನಾಯಿತು ಎಂಬುದು ಎಲ್ಲರಿಗೂ ತಿಳಿದಿದೆ. ಹಾಗಾದರೆ, ‘ಮಾತೋಶ್ರೀ’ ಏನು ಮಸೀದಿಯೇ ಎಂದು ಪ್ರಶ್ನಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!