ರಾಜ್ ಠಾಕ್ರೆಗೆ ಸಂಕಷ್ಟ: ಜಾಮೀನು ರಹಿತ ವಾರೆಂಟ್ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಧ್ವನಿವರ್ಧಕ ವಿಚಾರವಾಗಿ ‘ಮಹಾ’ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆಗೆ ಇದೀಗ ಸಂಕಷ್ಟ ಎದುರಾಗಿದ್ದು, ಠಾಕ್ರೆ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ.
4 ವರ್ಷ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ ಠಾಕ್ರೆ ವಿರುದ್ಧ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
2008ರಲ್ಲಿ ರಾಜ್ ಠಾಕ್ರೆ ) ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಲ್ಲಿ ಐಪಿಸಿ ಸೆಕ್ಷನ್ 109 ಮತ್ತು 117ರ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು.
ಇವರ ಜೊತೆಗೆ ಹಲವು ಎಂಎನ್‌ಎಸ್ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರನ್ನು ಬಂಧಿಸಿದ ತಮ್ಮ ಮುಂದೆ ಹಾಜರುಪಡಿಸುವಂತೆ ಮುಂಬಯಿ ಪೊಲೀಸ್ ಆಯುಕ್ತರಿಗೆ ಸಾಂಗ್ಲಿ ಜಿಲ್ಲೆಯ ಶಿರಾಲಾದಲ್ಲಿನ ಪ್ರಥಮ ದರ್ಜೆ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಸೂಚನೆ ನೀಡಿದ್ದಾರೆ.
ಜೂನ್ 8ರ ಒಳಗೆ ವಾರಂಟ್ ಅನುಷ್ಠಾನಗೊಳ್ಳಬೇಕು ಮತ್ತು ಇಬ್ಬರೂ ನಾಯಕರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು ಎಂದು ಕೋರ್ಟ್ ಸೂಚನೆ ನೀಡಿದೆ.
ಮತ್ತೊಂದು ಪ್ರಕರಣ ದಾಖಲು
ಇನ್ನು ಪ್ರಚೋದನಾಕಾರಿ ಭಾಷಣದ ಆರೋಪದಲ್ಲಿ ಭಾನುವಾರ ರಾಜ್ ಠಾಕ್ರೆ ವಿರುದ್ಧ ಔರಂಗಾಬಾದ್‌ನಲ್ಲಿ ಪ್ರಕರಣ ದಾಖಲಾಗಿದೆ. ಸಮಾವೇಶ ಆಯೋಜಿಸಿದ್ದ ಮೂವರು ಸಂಘಟಕರನ್ನು ಕೂಡ ಪೊಲೀಸರು ಎಫ್‌ಐಆರ್‌ನಲ್ಲಿ ಹೆಸರಿಸಿದ್ದಾರೆ. ಗಲಭೆಗೆ ಕಾರಣವಾಗುವ ಉದ್ದೇಶದೊಂದಿಗೆ ಪ್ರಚೋದನೆ ನೀಡಿದ್ದು ಮತ್ತು ಸಾರ್ವಜನಿಕರಿಂದ ಅಥವಾ ಹತ್ತಕ್ಕಿಂತ ಹೆಚ್ಚು ಮಂದಿಯಿಂದ ಅಪರಾಧ ಕೃತ್ಯ ನಡೆಸಲು ಪ್ರಚೋದನೆ ಕೊಟ್ಟ ಆರೋಪದಲ್ಲಿ ಐಪಿಸಿ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!