ರಾಜ್ ಠಾಕ್ರೆ ಗುಡುಗಿದಂತೆ ಡಬಲ್ ಲೌಡ್ ಸ್ಪೀಕರ್ ನಲ್ಲಿ ಕೇಳುತ್ತಿದೆ ಹನುಮಾನ್ ಚಾಲೀಸಾ

ಹೊಸದಿಗಂತ ಡಿಜಿಟಲ್ ಡೆಸ್ಕ್
ಮುಂಬೈ: ಮಸೀದಿಗಳಲ್ಲಿನ ಧ್ವನಿವರ್ಧಕಗಳನ್ನು ತೆರವುಗೊಳಿಸಿದ್ದರೆ, ಮಸೀದಿ ಮುಂದೆ ಡಬಲ್ ಲೌಡ್ ಸ್ಪೀಕರ್ ಹಾಕಿ ಹನುಮಾನ್ ಚಾಲೀಸಾ ಪಠಿಸುತ್ತೇವೆಂದು ಗುಡುಗಿದ ಮಹಾರಾಷ್ಟ್ರ ನವನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಅದರಂತೆ ನಡೆದಿದ್ದಾರೆ.

ಮಹಾರಾಷ್ಟ್ರ ಸರಕಾರಕ್ಕೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಮುಂಬೈನ ಘಾಟ್‌ಕೋಪರ್‌ನಲ್ಲಿರುವ ಮಹಾರಾಷ್ಟ್ರ ನವನಿರ್ಮಾಣ ಸೇನಾ ಕಚೇರಿಯ ಎದುರು ಧ್ವನಿವರ್ಧಕದಲ್ಲಿ ಹನುಮಾನ್ ಚಾಲೀಸಾ ಬಿತ್ತರಿಸಲಾಗುತ್ತಿದೆ.

ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ನಿನ್ನೆಯಷ್ಟೇ, ‘ನಾನು ಈಗ ಎಚ್ಚರಿಕೆ ನೀಡುತ್ತಿದ್ದೇನೆ… ಧ್ವನಿವರ್ಧಕಗಳನ್ನು ತೆಗೆದುಹಾಕಿ, ಇಲ್ಲದಿದ್ದರೆ ಮಸೀದಿಯ ಮುಂದೆ ಧ್ವನಿವರ್ಧಕಗಳನ್ನು ಹಾಕಿ ಹನುಮಾನ್ ಚಾಲೀಸಾ ಪಠಿಸುತ್ತೇವೆ’ ಎಂದು ಹೇಳಿದ್ದರು.

ಭಾನುವಾರ ಕಚೇರಿ ಮುಂಭಾಗದ ಮರದಲ್ಲಿ ಎರಡು ಧ್ವನಿವರ್ಧಕಗಳನ್ನು ಅಳವಡಿಸಿ, ಅದರಲ್ಲಿ ಹನುಮಾನ್ ಚಾಲೀಸಾ ಬಿತ್ತರಿಸಲಾಗುತ್ತಿದೆ. ಸ್ಥಳದಲ್ಲಿ ನೂರಾರು ಮಂದಿ ಜಮಾಯಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!