ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ರಾಜಾ ಪಟೇರಿಯಾ ‘ಮೋದಿಯನ್ನು ಕೊಲ್ಲು’ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಪನ್ನಾ ಪೊಲೀಸರು ಅವರ ನಿವಾಸಕ್ಕೆ ತೆರಳಿ ಪಟೇರಿಯಾ ಅವರನ್ನು ಬಂಧಿಸಿದ್ದಾರೆ. ನಿನ್ನೆ ಅವರ ವಿರುದ್ಧ ಪನ್ನಾದ ಪಾವೈನಲ್ಲಿ ಎಫ್‌ಐಆರ್ ದಾಖಲಾಗಿದೆ.
Damoh, Madhya Pradesh | Congress leader and former minister Raja Pateria detained by Panna Police from his residence, in connection with his alleged ‘kill Modi’ remarks. FIR was registered against him in Pawai of Panna yesterday. pic.twitter.com/Q62OUvGuM1
— ANI (@ANI) December 13, 2022
ಸಭೆಯೊಂದರಲ್ಲಿ ಪಟೇರಿಯಾ ‘ಪ್ರಧಾನಿ ಮೋದಿ ಅವರು ಧರ್ಮದ ಆಧಾರದ ಮೇಲೆ ಜನರನ್ನ ವಿಭವಿಸುತ್ತಿದ್ದಾರೆ. ಮೋದಿ ಅವರ ಆಡಳಿತದಲ್ಲಿ ದಲಿತರು ದೊಡ್ಡ ಬೆದರಿಕೆ ಎದುರಿಸುತ್ತಿದ್ದಾರೆ. ನೀವು ಸಂವಿಧಾನ ಉಳಿಸಲು ಮೋದಿಯನ್ನು ಕೊಲ್ಲಲು ಸಿದ್ಧರಾಗಬೇಕು. ಕೊಲ್ಲುವುದೆಂದರೆ ಹತ್ಯೆ ಮಾಡುವುದಲ್ಲ. ಅವರನ್ನು ಸೋಲಿಸಬೇಕು’ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಮಾಜಿ ಸಚಿವರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ನನ್ನ ಅಭಿಪ್ರಾಯವನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸ್ಪಷ್ಟನೆ ಕೂಡ ನೀಡಿದರು. ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು, ಕೇಸ್ ದಾಖಲಿಸುವಂತೆ ಪನ್ನಾ ಪೊಲೀಸ್ ಠಾಣೆಗೆ ಸೂಚಿಸಿದ ಬೆನ್ನಲ್ಲೇ ಎಫ್‌ಐಆರ್ ದಾಖಲು ಮಾಡಿ ಪಟೇರಿಯಾ ಅವರನ್ನ ಪೊಲೀಸರು ಬಂಧಿಸಿದ್ದಾರೆ.