ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್‌ವುಡ್‌ನ ಅಪ್ರತಿಮ ನಟ ಯಶ್ ಅವರ ಜನ್ಮದಿನದ ಅಂಗವಾಗಿ ಇಂದು ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ಇಡೀ ಚಿತ್ರರಂಗವೇ ಬೆರಗುಗಣ್ಣಿನಿಂದ ನೋಡುತ್ತಿದೆ. ಈ ಸಂಭ್ರಮದ ನಡುವೆ, ಯಶ್ ಅವರ ಯಶಸ್ಸಿನ ಆರಂಭಿಕ ಹಂತದ ಸಿನಿಮಾಗಳಾದ ‘ರಾಜಾಹುಲಿ’ ಮತ್ತು ‘ಸಂತು ಸ್ಟ್ರೈಟ್ ಫಾರ್ವರ್ಡ್’ ಚಿತ್ರಗಳನ್ನು ನಿರ್ಮಿಸಿದ್ದ ಹಿರಿಯ ನಿರ್ಮಾಪಕ ಕೆ. ಮಂಜು ಅವರು ಮಾತನಾಡಿ ಸಂತಸ ಹಂಚಿಕೊಂಡಿದ್ದಾರೆ.
ಇಂದು ಬಿಡುಗಡೆಯಾದ ‘ಟಾಕ್ಸಿಕ್’ ಟೀಸರ್ ನೋಡಿ ಕೆ. ಮಂಜು ಅವರು ಫುಲ್ ಫಿದಾ ಆಗಿದ್ದಾರೆ. ಯಶ್ ಅವರ ಮೇಕೋವರ್ ಮತ್ತು ಟೀಸರ್‌ನ ಕ್ವಾಲಿಟಿ ಅಂತರಾಷ್ಟ್ರೀಯ ಮಟ್ಟದಲ್ಲಿದೆ ಎಂದು ಅವರು ಗುಣಗಾನ ಮಾಡಿದ್ದಾರೆ.
ಯಶ್ ಅವರ ಇಂದಿನ ರೇಂಜ್ ಹೇಗಿದೆ ಎಂದರೆ, ಅವರು ಕೇವಲ ಭಾರತಕ್ಕೆ ಸೀಮಿತವಾಗಿಲ್ಲ. ವಿದೇಶಗಳಲ್ಲಿ ಯಶ್ ಅವರಿಗೆ ಇರುವ ಕ್ರೇಜ್ ಬಗ್ಗೆ ಮಾಹಿತಿ ಹಂಚಿಕೊಂಡ ಮಂಜು, “ವಿದೇಶಿ ಅಭಿಮಾನಿಗಳು ಸಹ ಯಶ್ ಸಿನಿಮಾ ಮತ್ತು ಹುಟ್ಟುಹಬ್ಬಕ್ಕಾಗಿ ಕಾತರದಿಂದ ಕಾಯುತ್ತಿರುತ್ತಾರೆ” ಎಂದು ಹೆಮ್ಮೆಯಿಂದ ಹೇಳಿದ್ದಾರೆ.
ಯಶ್ ಅವರ ಜೊತೆ ಆಪ್ತ ಒಡನಾಟ ಹೊಂದಿರುವ ಕೆ. ಮಂಜು ಅವರು, ತಮ್ಮ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭಾಶಯ ಕೋರುತ್ತಾ, ‘ಟಾಕ್ಸಿಕ್’ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

