Thursday, February 9, 2023

Latest Posts

CINEMA| ನ್ಯೂಯಾರ್ಕ್‌ನಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಪಡೆದ ರಾಜಮೌಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್’ ಚಿತ್ರ ವಿಶ್ವಾದ್ಯಂತ ಬ್ಲಾಕ್‌ಬಸ್ಟರ್ ಯಶಸ್ಸನ್ನು ಪಡೆದಿದೆ. ಈ ಚಿತ್ರವು ಅಂತರಾಷ್ಟ್ರೀಯ ಸ್ಥಳಗಳಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆಯುವ ಮೂಲಕ ಇತಿಹಾಸವನ್ನು ಸೃಷ್ಟಿಸಿde. ಇದೀಗ ರಾಜಮೌಳಿ ಇಂಗ್ಲಿಷ್ ನೆಲದಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಸ್ವೀಕರಿಸಿ ಎಲ್ಲರೂ ಭಾರತೀಯ ಚಿತ್ರರಂಗದತ್ತ ನೋಡುವಂತೆ ಮಾಡಿದ್ದಾರೆ.

ಈ ಚಲನಚಿತ್ರವು ನ್ಯೂಯಾರ್ಕ್ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್ ಪ್ರಶಸ್ತಿಗಳಲ್ಲಿ ಹಲವಾರು ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ. ನಿನ್ನೆ ರಾತ್ರಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜಮೌಳಿ ಅವರು ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದರು. ಪ್ರಶಸ್ತಿ ಸ್ವೀಕರಿಸಿದ ರಾಜಮೌಳಿ ಅವರ ಫೋಟೋಗಳನ್ನು ನಿರ್ಮಾಪಕ ಶೋಬು ತಮ್ಮ ಟ್ವಿಟರ್ ಮೂಲಕ ಶೇರ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ರಾಜಮೌಳಿ ಪಂಚೆಯುಟ್ಟು ಸಾಂಪ್ರದಾಯಿಕ ಭಾರತೀಯನಾಗಿ ಈ ಪ್ರಶಸ್ತಿ ಸಮಾರಂಭಕ್ಕೆ ಹೋಗಿದ್ದರು. ಆ ಫೋಟೋಗಳನ್ನು ನೋಡಿದ ನೆಟ್ಟಿಗರು ಭಾರತೀಯ ಚಿತ್ರರಂಗವನ್ನು ಜಗತ್ತಿಗೆ ಪರಿಚಯಿಸಿದ್ದಲ್ಲದೆ ನಮ್ಮ ಸಂಪ್ರದಾಯವನ್ನೂ ಪರಿಚಯಿಸಿದ ರಾಜಮೌಳಿಯ ಡ್ರೆಸ್ಸಿಂಗ್ ಗೆ ಹ್ಯಾಟ್ಸ್ ಆಫ್ ಹೇಳುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!