ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ರಾಜಕೀಯ ಪ್ರವೇಶದ ಬಗ್ಗೆ ನಿರೀಕ್ಷೆ ಹುಟ್ಟಿಸಿದ್ದ ಒಂದು ಗಂಟೆಯೊಳಗೆ ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪಕ್ಷಕ್ಕೆ ಬರೋದಿಲ್ಲ ಎಂದು ಹೇಳಿದ್ದಾರೆ.
ನಿರ್ಧಾರ ಮರುಪರಿಶೀಲನೆ ಮಾಡುತ್ತೇನೆ ಎಂದು ರಜನಿಕಾಂತ್ ಹೇಳಿದ್ದು, ಅಭಿಮಾನಿಗಳಿಗೆ ಕೊಂಚ ಸಮಾಧಾನ ನೀಡಿತ್ತು.
ಆದರೆ ರಜಿನಿ ಮಕ್ಕಳ್ ಮಂದ್ರಾಮ್ನ್ನು ವಿಸರ್ಜಿಸಲಾಗುವುದು, ರಜನಿಕಾಂತ್ ರಾಸಿಗರ್ ಸರ್ಪಾಣಿ ಮಂದ್ರಾಮ್ ಫ್ಯಾನ್ಸ್ ಕ್ಲಬ್ ಆಗಿ ಮುಂದುವರಿಯಲಿದೆ ಎಂದು ಹೇಳಿದ್ದಾರೆ.
ಆರ್ಎಂಎಂ ಜಿಲ್ಲಾ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದ ನಂತರ ರಜನಿಕಾಂತ್ ಮಾತನಾಡಿದ್ದಾರೆ.
‘ವಿವಿಧ ಸಮಸ್ಯೆಗಳಿಂದ ರಾಜಕೀಯ ಪಕ್ಷವನ್ನು ಸ್ಥಾಪಿಸಲು ಆಗುತ್ತಿಲ್ಲ. ಭವಿಷ್ಯದಲ್ಲೂ ರಾಜಕೀಯಕ್ಕೆ ಬರುವುದಿಲ್ಲ. ಆರ್ಎಂಎಂನ್ನು ವಿಸರ್ಜಿಸಲಾಗುವುದು ಫ್ಯಾನ್ ಕ್ಲಬ್ ಆಗಿ ಆರ್ಎಂಎಂ ಮುಂದುವರಿಯಲಿದೆ’ ಎಂದು ಹೇಳಿದ್ದಾರೆ.