ಏಕಕಾಲಕ್ಕೆ 12,854 ಸ್ಥಳಗಳ ಮೇಲೆ ದಾಳಿ, 8,950ಆರೋಪಿಗಳ ಬಂಧನ 

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜಸ್ಥಾನ ಪೊಲೀಸರು ಮಂಗಳವಾರ ರಾಜ್ಯದ 12,854 ಸ್ಥಳಗಳಲ್ಲಿ ದಾಳಿ ನಡೆಸಿ ಒಟ್ಟು 8,950 ಜನರನ್ನು ಬಂಧಿಸಿದ್ದಾರೆ.

ವಾಂಟೆಡ್ ಕ್ರಿಮಿನಲ್‌ಗಳು, ಸಮಾಜ ವಿರೋಧಿಗಳು ಮತ್ತು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಇತರ ವ್ಯಕ್ತಿಗಳನ್ನು ಬಂಧಿಸಲಾಗಿದೆ. 18,826 ಪೊಲೀಸ್ ಅಧಿಕಾರಿಗಳು ಮತ್ತು ನೌಕರರನ್ನು ಒಳಗೊಂಡ 4,143 ತಂಡಗಳು 12,854 ಪ್ರದೇಶಗಳಲ್ಲಿ ದಾಳಿ ನಡೆಸಿ 8,950 ಜನರನ್ನು ಬಂಧಿಸಿವೆ ಎಂದು ರಾಜಸ್ಥಾನ ಪೊಲೀಸ್ ಮಹಾನಿರ್ದೇಶಕ ಉಮೇಶ್ ಮಿಶ್ರಾ ತಿಳಿಸಿದ್ದಾರೆ.

3,304 ಪೊಲೀಸ್ ಅಧಿಕಾರಿಗಳು ಮತ್ತು ನೌಕರರನ್ನು ಒಳಗೊಂಡ 806 ತಂಡಗಳು 2,997 ಸ್ಥಳಗಳಲ್ಲಿ ದಾಳಿ ನಡೆಸಿ ಒಟ್ಟು 924 ಆರೋಪಿಗಳನ್ನು ಬಂಧಿಸಿವೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಅಪರಾಧ) ದಿನೇಶ್ ಎಂಎನ್ ತಿಳಿಸಿದ್ದಾರೆ.

3,090 ಪೊಲೀಸ್ ಅಧಿಕಾರಿಗಳು ಮತ್ತು ನೌಕರರನ್ನು ಒಳಗೊಂಡ 1,029 ತಂಡ 1,029 ಸ್ಥಳಗಳಲ್ಲಿ ದಾಳಿ ನಡೆಸಿ ಜೈಪುರ ಕಮಿಷನರೇಟ್‌ನಲ್ಲಿ ಒಟ್ಟು 296 ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!