ಹೊಸದಿಗಂತ ಡಿಜಿಟಲ್ ಡೆಸ್ಕ್:
2023ರ ರಾಜಸ್ಥಾನ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದಲೇ ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ಆರಂಭವಾಗಿದೆ. ರಾಜಸ್ಥಾನದ ಒಟ್ಟು 199 ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು, ಸಂಜೆ ಸಂಜೆ 6ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.
ರಾಜಸ್ಥಾನದಲ್ಲಿ 200 ವಿಧಾನಸಭಾ ಸ್ಥಾನಗಳಿದ್ದರೂ ಒಂದೇ ಒಂದು ಸ್ಥಾನಕ್ಕೆ ಮತದಾನ ನಡೆಯುತ್ತಿಲ್ಲ. ಕರಣಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ಕುನ್ನೂರು ನಿಧನರಾಗಿದ್ದು, ಚುನಾವಣೆಯನ್ನು ಮುಂದೂಡಲಾಗಿದೆ.
ಇಂದು ನಡೆಯಲಿರುವ 199 ಸ್ಥಾನಗಳಿಗೆ 1862 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಟ್ಟು ಮತದಾರರ ಸಂಖ್ಯೆ 5,25,38,105 ಆಗಿದ್ದು, ರಾಜ್ಯಾದ್ಯಂತ 36,101 ಮತಗಟ್ಟೆಗಳಲ್ಲಿ 51,507 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಹಾಗೂ ಈ ಬಾರಿಯ ವಿಧಾನಸಭಾ ಚುನಾವಣೆಗೆ 2,74,846 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ.
ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ಈ ಚುನಾವಣೆಯನ್ನು ಪ್ರತಿಷ್ಠೆಯಿಂದ ತೆಗೆದುಕೊಂಡಿವೆ. ಡಿಸೆಂಬರ್ 3 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.