ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಸಂಜು ಸ್ಯಾಮ್ಸನ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.
ರಾಜಸ್ಥಾನ ರಾಯಲ್ಸ್ ವಿರುದ್ಧ ಗೆಲ್ಲುವ ಮೂಲಕ ಜಯದ ಹಳಿಗೆ ಮರಳುವ ಆರ್‌ಸಿಬಿ ಕಾತರದಲ್ಲಿದೆ.
ಸತತ ಮೂರು ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿರುವ ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇನ್ನು ಕಳೆದ ಎರಡು ಪಂದ್ಯಗಳಲ್ಲಿ ಆಘಾತಕಾರಿ ಸೋಲು ಕಂಡಿರುವ ಆರ್‌ಸಿಬಿ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಎಡಗೈ ಬ್ಯಾಟರ್ ಸೌರಭ್ ಚೌಹ್ಹಾನ್ ತಂಡ ಕೂಡಿಕೊಂಡಿದ್ದಾರೆ. ಇನ್ನು ವಿಕೆಟ್ ಕೀಪರ್ ಅನೂಜ್ ರಾವತ್ ಅವರನ್ನು ಕೈಬಿಡಲಾಗಿದ್ದು, ದಿನೇಶ್ ಕಾರ್ತಿಕ್ ವಿಕೆಟ್ ಕೀಪರ್ ಆಗಿ ಕಾಣಿಸಿಕೊಳ್ಳಲಿದ್ದಾರೆ.