ಟಾಸ್ ಗೆದ್ದ ರಾಜಸ್ಥಾನ ಬೌಲಿಂಗ್: ಮೊದಲ ಸ್ಥಾನದತ್ತ ಕೆಕೆಆರ್‌ ಕಣ್ಣು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ಟೂರ್ನಿಯ 31ನೇ ಪಂದ್ಯದಲ್ಲಿಂದು ರಾಜಸ್ಥಾನ ರಾಯಲ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಮೊದಲು ಬೌಲಿಂಗ್ ಆಯ್ಕೆಮಾಡಿಕೊಂಡಿದ್ದಾರೆ.

ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಜೋಸ್ ಬಟ್ಲರ್ ಹಾಗೂ ರವಿಚಂದ್ರನ್ ಅಶ್ವಿನ್ ತಂಡ ಕೂಡಿಕೊಂಡಿದ್ದಾರೆ. ಇನ್ನೊಂದೆಡೆ ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ರಾಜಸ್ಥಾನ ರಾಯಲ್ಸ್‌ ಗೆದ್ದರೆ ಅಗ್ರಸ್ಥಾನ ಭದ್ರಪಡಿಸಿಕೊಳ್ಳಲಿದ್ದು, ಕೆಕೆಆರ್‌ ಈ ಪಂದ್ಯದ ಗೆಲುವಿನ ಮೂಲಕ ನಂ.1 ಸ್ಥಾನಕ್ಕೇರಲು ಕಾಯುತ್ತಿದೆ.

ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್‌ 6 ಪಂದ್ಯಗಳಲ್ಲಿ 5 ಗೆದ್ದಿದ್ದು, ಅಂಕಪಟ್ಟಿಯಲ್ಲಿ ಸದ್ಯ ಅಗ್ರಸ್ಥಾನದಲ್ಲಿದೆ. ಇನ್ನೊಂದೆಡೆ ಶ್ರೇಯಸ್ ಅಯ್ಯರ್ ನೇತೃತ್ವದ ಕೋಲ್ಕತಾ ನೈಟ್ ರೈಡರ್ಸ್‌ 5ರಲ್ಲಿ 4 ಪಂದ್ಯಗಳಲ್ಲಿ ಜಯಗಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!