ರಾಜಸ್ಥಾನದಲ್ಲಿ ಕಾರು-ಟ್ರಕ್ ನಡುವೆ ಭೀಕರ ಅಪಘಾತ: ಮೂವರು ಸಜೀವ ದಹನ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಜೀವ ದಹನವಾಗಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಪಿಲಾನಿ–ಸಾದುಲ್‌ಪುರ ರಸ್ತೆಯ ತ್ರಿಪಾಲಿ ಟೋಲ್ ಪ್ಲಾಜಾ ಬಳಿ ಈ ದುರಂತ ನಡೆದಿದೆ. ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದ ಮಹೀಂದ್ರಾ ಬೊಲೆರೊ ಕಾರು ಡಂಪರ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಕ್ಷಣಾರ್ಧದಲ್ಲೇ ಎರಡೂ ವಾಹನಗಳಿಗೆ ಬೆಂಕಿ ತಗುಲಿತು. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಗಾಯಗೊಂಡ ಐವರನ್ನು ತಕ್ಷಣ ಪಿಲಾನಿಯ ಬಿರ್ಲಾ ಸಾರ್ವಜನಿಕ … Continue reading ರಾಜಸ್ಥಾನದಲ್ಲಿ ಕಾರು-ಟ್ರಕ್ ನಡುವೆ ಭೀಕರ ಅಪಘಾತ: ಮೂವರು ಸಜೀವ ದಹನ