ಗುಜರಾತ್ ಗೆ ಇಂದು ರಾಜಸ್ಥಾನ ಸವಾಲು: ಟಾಸ್ ಗೆದ್ದ ರಾಯಲ್ಸ್ ಬೌಲಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ನಲ್ಲಿ ಇಂದು ಗುಜರಾತ್ ಟೈಟನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ.

ಉಭಯ ತಂಡಗಳು ಕೂಡ ಐಪಿಎಲ್‌ನಲ್ಲಿ ಇದುವರೆಗೂ 7 ಬಾರಿ ಮುಖಾಮುಖಿಯಾಗಿವೆ. ಆದ್ರೆ, ಇದರಲ್ಲಿ ಗುಜರಾತ್ ಟೈಟನ್ಸ್ ಬರೋಬ್ಬರಿ 6 ಪಂದ್ಯ ಗೆದ್ದು ಮುನ್ನಡೆ ಸಾಧಿಸಿದೆ. ಆದ್ರೆ, ರಾಜಸ್ಥಾನ ರಾಯಲ್ಸ್ ಕೇವಲ ಒಂದೇ ಒಂದು ಪಂದ್ಯವನ್ನು ಗೆದ್ದಿದೆ.

ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ನಿತೀಶ್ ರಾಣಾ, ರಿಯಾನ್ ಪರಾಗ್ (ನಾಯಕ), ಧ್ರುವ್ ಜುರೆಲ್ (ವಿಕೀ), ಶಿಮ್ರಾನ್ ಹೆಟ್ಮೆಯರ್, ವನಿಂದು ಹಸರಂಗ, ಜೋಫ್ರಾ ಆರ್ಚರ್, ಮಹೀಶ್ ತೀಕ್ಷಣ, ಸಂದೀಪ್ ಶರ್ಮಾ, ಯುಧ್ವೀರ್ ಸಿಂಗ್ ಚರಕ್ ಪ್ಲೇಯಿಂಗ್11 ನಲ್ಲಿ ಸ್ಥಾನ ಪಡೆದಿದ್ದಾರೆ.

ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ಸಾಯಿ ಸುದರ್ಶನ್, ಶುಬ್ಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿಕೀ), ವಾಷಿಂಗ್ಟನ್ ಸುಂದರ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ಕರೀಂ ಜನತ್, ರಶೀದ್ ಖಾನ್, ಸಾಯಿ ಕಿಶೋರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಪ್ಲೇಯಿಂಗ್‌11 ನಲ್ಲಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!