ಹೊಸದಿಗಂತ ಡಿಜಿಟಲ್ ಡೆಸ್ಕ್:
ದೌಸಾದ ಸಲಾವಾಸ್ ಜೈಲಿನ ಕೈದಿಯೊಬ್ಬ ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 29 ವರ್ಷದ ರಿಂಕು ಬೆದರಿಕೆ ಹಾಕಿದ ಆರೋಪಿ. ಸಲಾವಸ್ ಜೈಲಿಗೆ ಕರೆ ಮಾಡಲು ಬಳಸಲಾದ ಮೊಬೈಲ್ ಫೋನ್ ಇರುವ ಸ್ಥಳವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ಈತ ಜೈಪುರ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮುಖ್ಯಮಂತ್ರಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಗಿನ ಜಾವ 3 ರಿಂದ ಬೆಳಿಗ್ಗೆ 7 ರವರೆಗೆ ಜೈಲಿನಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಜೈಲಿನಿಂದ ಫೋನ್ ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಇನ್ನಷ್ಟು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.