ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲ್ಕತ್ತಾ ನೈಟ್ ರೈಡರ್ಸ್ ಸ್ಪಿನ್ನರ್ಗಳ ದಾಳಿಗೆ ಕುಸಿದ ರಾಜಸ್ತಾನ ರಾಯಲ್ಸ್ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 151 ರನ್ಗಳಿಸಿದೆ.
ಟಾಸ್ ಗೆದ್ದ ಕೆಕೆಆರ್ ನಾಯಕ ಅಜಿಂಕ್ಯ ರಹಾನೆ ರಾಜಸ್ಥಾನ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದರು. ಆದರೆ ಇನ್ನಿಂಗ್ಸ್ ಆರಂಭಿಸಿದ ರಾಯಲ್ಸ್ ಮೊದಲ ವಿಕೆಟ್ಗೆ 33 ರನ್ ಸಿಡಿಸಿ ಉತ್ತಮ ಆರಂಭ ಪಡೆದುಕೊಂಡಿತ್ತು. ಸ್ಯಾಮ್ಸನ್ ಕೇವಲ 13 ರನ್ಗಳಿಸಿ ವಿಕೆಟ್ ಒಪ್ಪಿಸಿದರು. 3ನೇ ಕ್ರಮಾಂಕದಲ್ಲಿ ಬಂದ ನಾಯಕ ಪರಾಗ್ 15 ಎಸೆತಗಳಲ್ಲಿ 3 ಸಿಕ್ಸರ್ಗಳ ಸಹಿತ 25 ರನ್ಗಳಿಸಿದರು. 29 ರನ್ಗಳಿಸಿದ್ದ ಜೈಸ್ವಾಲ್ ಕೂಡ ಔಟ್ ಆದರು.
ನಂತರ ಬಂದ ಯಾವ ಬ್ಯಾಟರ್ ಕೂಡ ಹೆಚ್ಚು ಹೊತ್ತು ಕ್ರೀಸ್ನಲ್ಲಿ ನಿಲ್ಲುವಲ್ಲಿ ವಿಫಲರಾದರು. ಜುರೆಲ್ 28 ಎಸೆತಗಳಲ್ಲಿ 5 ಬೌಂಡರಿಗಳ ಸಹಾಯದಿಂದ 33 ರನ್ಗಳಿಸಿದರೆ, ಜೋಫ್ರಾ ಆರ್ಚರ್ 7 ಎಸೆತಗಳಲ್ಲಿ 2 ಸಿಕ್ಸರ್ಗಳ ಸಹಿತ 16 ರನ್ಗಳಿಸಿ ತಂಡದ ಮೊತ್ತವನ್ನು 150ರ ಗಡಿದಾಟಿಸಿದರು.