ರಾಜಸ್ಥಾನ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನರ್ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜಸ್ಥಾನ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ಅಭ್ಯರ್ಥಿಗಳ ಪ್ರಚಾರ ಕಾರ್ಯ ಶುರುವಾಗಿದೆ. ಈ ನಡುವೆ ಕಾಂಗ್ರೆಸ್ ಗೆ ಆಘಾತ ಎದುರಾಗಿದ್ದು, ರಾಜಸ್ಥಾನದ ಕರಣ್‌ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನರ್ (75) ಅವರು ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಗುರ್ಮೀತ್ ಸಿಂಗ್ ಕೂನರ್ ಮೂತ್ರಪಿಂಡ ಸಮಸ್ಯೆ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು. ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

200 ಕ್ಷೇತ್ರಗಳಿರುವ ರಾಜಸ್ಥಾನ ವಿಧಾನಸಭಾ ಚುನಾವಣೆ ನವೆಂಬರ್ 25ರಂದು ನಡೆಯಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!