ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನ ಕಾಂಗ್ರೆಸ್ ಕ್ರಿಕೆಟ್ ತಂಡದಂತಿದ್ದು, ಅವರ ಬ್ಯಾಟ್ಸ್ ಮ್ಯಾನ್ ಗಳು ಐದು ವರ್ಷಗಳ ಕಾಲ ಪರಸ್ಪರ ರನ್ ಔಟ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.
ಚುರು ಜಿಲ್ಲೆಯ ತಾರಾನಗರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ತ್ವರಿತ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ನವೆಂಬರ್ 25ರಂದು ನಡೆಯಲಿರುವ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡುವಂತೆ ಜನರಿಗೆ ಕರೆ ನೀಡಿದರು.
ಕಾಂಗ್ರೆಸ್ ಮತ್ತು ಅಭಿವೃದ್ಧಿ ಶತ್ರುಗಳಾಗಿವೆ ಮತ್ತು ಶತ್ರುಗಳಾಗಿಯೇ ಉಳಿಯುತ್ತವೆ. ಕಾಂಗ್ರೆಸ್ ಮತ್ತು ಒಳ್ಳೆಯ ಉದ್ದೇಶಗಳ ನಡುವಿನ ಸಂಬಂಧವು ಬೆಳಕು ಮತ್ತು ಕತ್ತಲೆಯ ನಡುವಿನ ಸಂಬಂಧವಾಗಿದೆ ಎಂದು ಪ್ರಧಾನಿ ಹೇಳಿದರು.
ಒಂದು ಶ್ರೇಣಿ, ಒಂದು ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ದಶಕಗಳಿಂದಲೂ ಕಾಂಗ್ರೆಸ್ ಮಾಜಿ ಸೈನಿಕರನ್ನು ದಾರಿತಪ್ಪಿಸುತ್ತಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ದುರಾಡಳಿತದಿಂದಾಗಿ ರಾಜಸ್ಥಾನದಲ್ಲಿ ಹಣದುಬ್ಬರ ಮತ್ತು ನಿರುದ್ಯೋಗ ನಿಯಂತ್ರಣಕ್ಕೆ ಬರುತ್ತಿಲ್ಲ ಎಂದು ಪ್ರಧಾನಿ ಮೋದಿ ಹೇಳಿದರು.
200 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25ರಂದು ಮತದಾನ ನಡೆಯಲಿದೆ. ಡಿಸೆಂಬರ್ 3ರಂದು ಫಲಿತಾಂಶ ಪ್ರಕಟವಾಗಿದೆ. ಸದ್ಯ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಅಧಿಕಾರದಲ್ಲಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.