Monday, December 4, 2023

Latest Posts

ರಾಜಸ್ಥಾನ ಚುನಾವಣೆ: ಕಾಂಗ್ರೆಸ್​ 33 ಕ್ಷೇತ್ರಗಳ ಟಿಕೆಟ್​ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನದ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಕೂಡ ಮೊದಲ ಪಟ್ಟಿ ಬಿಡುಗಡೆಗೊಳಿಸಿದೆ.

ಅಧಿಕಾರ ಉಳಿಸಿಕೊಳ್ಳಲು ಹೋರಾಡುತ್ತಿರುವ ಕಾಂಗ್ರೆಸ್​ ತನ್ನ ಮೊದಲ ಪಟ್ಟಿಯಲ್ಲಿ ಸಿಎಂ ಅಶೋಕ್ ಗೆಹ್ಲೋಟ್(ಸರ್ದಾರ್‌ಪುರ ಕ್ಷೇತ್ರ), ಸಚಿನ್ ಪೈಲಟ್ (ಟೋಂಕ್ ಕ್ಷೇತ್ರ) ಸೇರಿದಂತೆ 33 ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ರಾಜ್ಯಾಧ್ಯಕ್ಷ ಗೋವಿಂದ್ ಸಿಂಗ್ ದೋತಸ್ರಾ ಅವರು ಲಚ್ಮಂಗಢದಿಂದ ಸ್ಪರ್ಧಿಸಲಿದ್ದಾರೆ. ಪಕ್ಷದ ಹಿರಿಯ ನಾಯಕ ಮತ್ತು ವಿಧಾನಸಭೆ ಸ್ಪೀಕರ್ ಸಿಪಿ ಜೋಶಿ ಅವರು ನಾಥದ್ವಾರದಿಂದ ಸ್ಪರ್ಧಿಸಲಿದ್ದಾರೆ.

2018 ರ ವಿಧಾನಸಭಾ ಚುನಾವಣೆಯಲ್ಲಿ 200 ಸದಸ್ಯ ಬಲದಲ್ಲಿ ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದರೆ, ಬಿಜೆಪಿ 73 ಸ್ಥಾನಗಳನ್ನು ಗೆದ್ದಿತು. ಸಿಎಂ ಅಶೋಕ್ ಗೆಹ್ಲೋಟ್ ಬಿಎಸ್​ಪಿ ಮತ್ತು ಸ್ವತಂತ್ರ ಶಾಸಕರ ಬೆಂಬಲದೊಂದಿಗೆ ಅಧಿಕಾರ ಹಿಡಿದಿದ್ದರು.

ನವೆಂಬರ್​ 23 ರಂದು ಮತದಾನ ನಡೆಯಲಿದ್ದು, ಡಿಸೆಂಬರ್​ 3 ರಂದು ಫಲಿತಾಂಶ ಹೊರಬೀಳಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!