ಭಾರತ್ ಜೋಡೋ ಯಾತ್ರೆಗೆ ಪ್ರತಿಭಟನೆ ಬಿಸಿ: ಸಾಲ ಮನ್ನಾಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜಸ್ಥಾನದ ಅಲ್ವಾರ್‌ನಲ್ಲಿ ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯ ವೇಳೆ ರೈತರ ಗುಂಪೊಂದು ಪ್ರತಿಭಟನೆ ನಡೆಸಿತು. ರಾಷ್ಟ್ರೀಯ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ರೈತರು, ರಾಜಸ್ಥಾನ ಸರ್ಕಾರವು ಕೃಷಿ ಸಾಲ ಮನ್ನಾ ಭರವಸೆಯನ್ನು ಈಡೇರಿಸಿಲ್ಲ ಎಂದು ದೂರಿದರು.

ರೈತರ ಸಾಲ ಮನ್ನಾ ಮಾಡುವುದಾಗಿ ರಾಹುಲ್ ಗಾಂಧಿ ಭರವಸೆ ನೀಡಿದ್ದರೂ ಏನೂ ಆಗಿಲ್ಲ ಎಂದು ರೈತರೊಬ್ಬರು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ನೀಡಿದ ಯಾವ ಭರವಸೆಯೂ ಈಡೇರಿಲ್ಲ, ನಾವೂ ನೀರಿನ ಅಭಾವವನ್ನೂ ಎದುರಿಸುತ್ತಿದ್ದೇವೆ ಎಂದು ತಮ್ಮ ಅಳಲನ್ನು ತೋಡಿಕೊಂಡರು.

ಭಾರತ್ ಜೋಡೋ ಯಾತ್ರೆ ಮುಂದಿನ ವರ್ಷದ ವೇಳೆಗೆ 3,570 ಕಿ.ಮೀ. ಇದು ಭಾರತದ ಇತಿಹಾಸದಲ್ಲಿ ಯಾವುದೇ ಭಾರತೀಯ ರಾಜಕಾರಣಿ ನಡೆಸದ ಕಾಲ್ನಡಿಗೆಯಲ್ಲಿ ಅತಿ ಉದ್ದದ ಮೆರವಣಿಗೆ ಎಂದು ಕಾಂಗ್ರೆಸ್ ಈ ಹಿಂದೆ ಹೇಳಿಕೊಂಡಿತ್ತು. ಇಲ್ಲಿಯವರೆಗೆ, ಭಾರತ್ ಜೋಡೋ ಯಾತ್ರೆಯು ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಸಂಚರಿಸಿ ಇದೀಗ ರಾಜಸ್ಥಾನದಲ್ಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!